ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ಕ್ಷಿಪ್ರ ಬೆಳವಣಿಗೆ ನಡೆಸಿದ್ದು ಹಾಲಿ ಅಧ್ಯಕ್ಷ ರಮೇಶ್ ಕತ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ಡಿಸಿಸಿ ಬ್ಯಾಂಕಿನ ನಿರ್ದೇಶಕರು ಸೇರಿಕೊಂಡು ಅವಿಶ್ವಾಸ ನಿರ್ಣಯ ಕೈಗೊಳ್ಳುವ ಭೀತಿಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಸೋಲಿನ ನಂತರ ಜೊಲ್ಲೆ ಹಾಗೂ ಕತ್ತಿ ನಡುವೆ ವೈಮನಸ್ಸು ಏರ್ಪಟ್ಟಿತ್ತು. ಈಗ ಡಿಸಿಸಿ ಬ್ಯಾಂಕ್ ಅಂಗಳಕ್ಕೆ ಈ ಜಗಳ ಬಂದು ನಿಂತಿದೆ.
ನಿನ್ನೆಯಷ್ಟೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ವಿರುದ್ಧ ಅನೇಕ ನಿರ್ದೇಶಕರು ಸಭೆ ನಡಿಸಿ ಆಕ್ರೋಶ ಹೊರಹಾಕಿದ್ದರು. ನಂತರ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಮಧ್ಯಸ್ಥಿಕೆಯಲ್ಲಿ ಸಭೆ ನಡೆಸಲಾಗಿತ್ತು.
ಕಳೆದ 41 ವರ್ಷಗಳಿಂದ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ರಮೇಶ್ ಕತ್ತಿ, 6 ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಇವರಿಗೆ ಟಿಕೆಟ್ ನಿರಾಕರಣೆ ಮಾಡಲಾಗಿತ್ತು.

