ಕತ್ತಿ ವಿರುದ್ಧ ಕಾನೂನು ಸಮರ ಸಾರಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ವಿರುದ್ಧ ರಮೇಶ್ ಕತ್ತಿ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ. ಬರುವ ದೀಪಾವಳಿ ಹಬ್ಬದ ನಂತರ ಕಾನೂನು ಮುಖಾಂತರ ಉತ್ತರಿಸುವೆ ಎಂದರು.
ಗುರುವಾರ ನಗರದ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಗೆ ಆಗಮಿಸಿ ಏಳು ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಮಾತನಾಡಿದ ಇವರು. ನಮ್ಮ ವಿರುದ್ಧ ರಮೇಶ್ ಕತ್ತಿ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ. ನಾವು ಆ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಯಾವ ಹೋರಾಟ ಮಾಡಬೇಕು ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆ. ದೀಪಾವಳಿ ಹಬ್ಬ ಮುಗಿದ ನಂತರ ಕಾನೂನು ಹೋರಾಟದ ಮುಖಾಂತರ ಉತ್ತರಿಸುತ್ತೇನೆ ಎಂದು ಹರಿಹಾಯ್ದರು.
ಡಿಸಿಸಿ ಬ್ಯಾಂಕ್ ಚುನಾವಣೆಯನ್ನು ನಮ್ಮದೇ ಆದ ಬೆಂಬಲಿತ ಅಭ್ಯರ್ಥಿಗಳು ಗುಂಪು ಒಟ್ಟುಗೂಡಿ ಚುನಾವಣೆ ಎದುರಿಸುತ್ತೇವೆ. ಇಲ್ಲಿ ಪಕ್ಷಾತೀತವಾಗಿ ಎಲ್ಲಾ ಮುಖಂಡರು ಸೇರಿ ಚುನಾವಣೆ ಗೆಲ್ಲುವ ಮೂಲಕ ನಮ್ಮದೇ ಅಭ್ಯರ್ಥಿ ಅಧ್ಯಕ್ಷ ಹುದ್ದೆ ಅಲಂಕರಿಸುವ ವಿಶ್ವಾಸ ಇದೇ ಎಂದರು.
ಈಗಾಗಲೇ ಏಳು ಕ್ಷೇತ್ರದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ನಮ್ಮ ಪರವಾಗಿ ಹದಿಮೂರು ಕ್ಷೇತ್ರದಿಂದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ಇನ್ನುಳಿದಂತೆ ಅಥಣಿ, ಕಾಗವಾಡ ಹಾಗೂ ಚಿಕ್ಕೋಡಿ ಕ್ಷೇತದಿಂದ ನಮ್ಮ ಬಣದಿಂದ ಯಾವುದೇ ಅಭ್ಯರ್ಥಿ ಕಣಕ್ಕೆ ಇಳಿಸುವುದಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಅಪಪ್ರಚಾರಕ್ಕೆ ಕಿವಿಗೊಡಬೇಡಿ : ಡಿಸಿಸಿ ಬ್ಯಾಂಕ್ ಚುನಾವಣೆ ವಿಷಯವಾಗಿ ಯಾರೇ ಅಪಪ್ರಚಾರ ಮಾಡಿದರೆ ಕಿವಿಗೊಡುವ ಅವಶ್ಯಕತೆ ಇಲ್ಲ. ಠೇವಣಿ ಹಣ ಹೆಚ್ವಾಗಿದೆ ರೈತರ ಪರವಾಗಿ ನಮ್ಮ ನಿಲುವು ಇದ್ದು ಎಲ್ಲರಿಗೂ ಸಮಾನ ನ್ಯಾಯ ಕೊಟ್ಟು ಉತ್ತಮ ರೀತಿಯಲ್ಲಿ ಬ್ಯಾಂಕ್ ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.
ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ವಿರುದ್ಧ ರಮೇಶ್ ಕತ್ತಿ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ. ನಾವು ಆ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಯಾವ ಹೋರಾಟ ಮಾಡಬೇಕು ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆ. ದೀಪಾವಳಿ ಹಬ್ಬ ಮುಗಿದ ನಂತರ ಕಾನೂನು ಹೋರಾಟದ ಮುಖಾಂತರ ಉತ್ತರಿಸುತ್ತೇನೆ ಎಂದು ಹರಿಹಾಯ್ದರು.
ಈ ಸಂದರ್ಭದಲ್ಲಿ ಶಾಸಕ ವಿಶ್ವಾಸ್ ವೈದ್ಯ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಸಾಸಕ ಮಹಾಂತೇಶ್ ದೊಡ್ಡಗೌಡರ್, ಅರವಿಂದ ಪಾಟೀಲ, ಮುಖಂಡರಾದ ವಿರೂಪಾಕ್ಷ ಮಾಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು


