ರಾಯಬಾಗ : ಕಲ್ಲಿನಿಂದ ವ್ಯಕ್ತಿ ಮೇಲೆ ಭೀಕರ ಹಲ್ಲೆ, ವೀಡಿಯೋ ವೈರಲ್
ಬೆಳಗಾವಿ: ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿ ನಡೆದಿದೆ.
ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸದಾಶಿವ ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಹಲ್ಲೆಗೊಳಗಾದ ವ್ಯಕ್ತಿ. ಕಟ್ಟಡಯೊಂದರ ಬಳಿಯ ಚರಂಡಿಯಲ್ಲಿ ನಿಂತಿರುವ ವ್ಯಕ್ತಿಗೆ ಮೂವರು ಮನಬಂದತೆ ಕಲ್ಲಿನಿಂದ ಹೊಡೆದು ಅತ್ಯಂತ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ.
ಈ ಹಲ್ಲೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕ್ರಮಕ್ಕೆ ಮುಂದಾಗದ ಸ್ಥಳೀಯ ಪೊಲೀಸರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿದವ ಎನ್ನಲಾಗುತ್ತಿದೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ.

