ರಾಯಬಾಗದ ಸ್ವಾಮೀಜಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಬೆಳಗಾವಿ : ಸ್ವಾಮೀಜಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಮಾತ್ರವಲ್ಲದೆ ಕೊಲೆ ಬೆದರಿಕೆ ಆರೋಪದ ಮೇಲೆ ರಾಮ ಮಂದಿರ ಮಠದ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಾಮೀಜಿ ತಮ್ಮ ಮಠಕ್ಕೆ ಬರುತ್ತಿದ್ದ ಭಕ್ತನ ಮಗಳನ್ನು ಹೊರ ಜಿಲ್ಲೆಯ ಲಾಡ್ಜ್ ಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದು ಬೆಳಕಿಗೆ ಬಂದಿದ್ದು ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರು ದಾಖಲಾಗುತ್ತಿದ್ದಂತೆ ಸ್ವಾಮೀಜಿಯ ರಾಮಮಂದಿರ ಮಠಕ್ಕೆ ಪೊಲೀಸರು ಭೇಟಿ ನೀಡಿದ ಸಂದರ್ಭದಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಇನ್ನೂ ಅತ್ಯಾಚಾರಕ್ಕೆ ಒಳಗಾದ ಯುವತಿಯನ್ನು ಸ್ವಾಮೀಜಿ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದ ಎಂದು ತಿಳಿದುಬಂದಿದೆ.
ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


