ಬೆಳಗಾವಿ : ಉಸ್ತುವಾರಿ ಸಚಿವರಿಂದ 73 ನೇ ಗಣರಾಜ್ಯೋತ್ಸವ ಆಚರಣೆ
ಬೆಳಗಾವಿ : 73 ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಧ್ವಜಾರೋಹಣ ನೆರವೇರಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು. 73ನೇ ಗಣರಾಜೋತ್ಸವದ ಶುಭಾಶಯಗಳನ್ನು ತಿಳಿಸಲು ನನಗೆ ಅತ್ಯಂತ ಸಂತೋಷವೆನಿಸುತ್ತದೆ. ಇಂದಿನ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾಗಿಯಾಗಿರುವ ನಾಡಿನ ಹಿರಿಯರಿಗೆ ಸದೃಢ ಪ್ರಜಾಪ್ರಭುತ್ವದ ನಾಡು ಕಟ್ಟಲು ದುಡಿದ ಮಹನಿಯರಿಗೆ, ವಿದ್ವಾಂಸರು, ಕವಿ-ಸಾಹಿತಿಗಳಿಗೆ, ಚಿಂತಕರು, ಜಿಲ್ಲೆಯ ಶಾಸಕ ಮಿತ್ರರು, ಸಂಸದರು, ಹಾಗೂ ಎಲ್ಲ ಜನಪ್ರತಿನಿಧಿಗಳು, ನಾಗರಿಕ ಬಂಧುಗಳು, ಸಹೋದರ-ಸಹೋದರಿಯರು ಮತ್ತು ಮಾಧ್ಯಮ ಸ್ನೇಹಿತರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯ ತಿಳಿಸಿದರು.