ನಾಳೆ ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ ; ಸೋಲಿನ ಭೀತಿಯಲ್ಲಿ ಬಿಜೆಪಿ
ಬೆಂಗಳೂರು : ತೀವ್ರ ಕುತೂಹಲ ಮೂಡಿಸಿರುವ ಹರಿಯಾಣ ಹಾಗೂ ಜಮ್ಮು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು ಎಲ್ಲರ ಕಣ್ಣು ಎರಡೂ ರಾಜ್ಯದ ಮೇಲೆ ನೆಟ್ಟಿದೆ.
ಈಗಾಗಲೇ ಹಲವಾರು ಸಂಸ್ಥೆಗಳು ಮತ ಎಣಿಕೆ ಪೂರ್ವ ನಡೆಸಿದ ಸಮೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಹರಿಯಾಣ ಹಾಗೂ ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿಕೊಂಡಿವೆ.
90 ವಿಧಾನಸಭಾ ಕ್ಷೇತ್ರ ಹೊಂದಿರುವ ಹರಿಯಾಣ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಆಡಳಿತದಲ್ಲಿತ್ತು. ಆದರೆ ಇದೇ ವರ್ಷದ ಮಾರ್ಚ್ 12 ರಂದು 9 ವರ್ಷ ಸಿಎಂ ಸ್ಥಾನ ಅಲಂಕರಿಸಿದ್ದ ಮನೋಹರ್ ಲಾಲ್ ಕಟ್ಟರ್ ಕೆಳಗಿಳಿಸಿ ಹಿಂದುಳಿದ ಸಮುದಾಯದ ನಯಾಬ್ ಸಿಂಗ್ ಸೈನಿ ಅವರನ್ನು ಸಿಎಂ ಮಾಡಿತ್ತು.
ಕಳೆದ ಹತ್ತು ವರ್ಷದ ಬಿಜೆಪಿ ಆಡಳಿತ ಜನಪ್ರಿಯತೆ ಕಳೆದುಕೊಂಡಿದ್ದು ಬಹಿರಂಗವಾಗಿ ಕಂಡುಬರುತ್ತಿದೆ. ಜೊತೆಗೆ ಕಳೆದ ಚುನಾವಣೆಯಲ್ಲಿ ಸರ್ಕಾರ ರಚಿಸಲು ಸಹಕಾರಿ ಆಗಿದ್ದ
ಜೆಜೆಪಿ ( ಜನನಾಯಕ ಜನತಾ ಪಾರ್ಟಿ ) ದುಶ್ಯಂತ್ ಚೌಟಾಲಾ ಅವರು ಈ ಬಾರಿ ಅಜಾದ್ ಸಮಾಜ್ ಪರ್ಟಿ ಜೊತೆ ಮೈತ್ರಿ ಮಾಡಿಕೊಂಡಿದೆ.
ಚುನಾವಣಾ ಪೂರ್ವದ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಬಹುಮತ ಪಡೆಯುತ್ತದೆ ಎಂದು ಹೇಳಲಾಗುತ್ತಿದೆ. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಸ್ಥಾನ ಅಲಂಕರಿಸಿದ್ದ ಭೂಪಿಂದರ್ ಸಿಂಗಾ ಹೂಡಾ ಈ ಬಾರಿಯೂ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.
ಇನ್ನೂ ಜಮ್ಮ ಕಾಶ್ಮೀರದಲ್ಲಿ ಆರ್ಟಿಕಲ್ 370 ವಾಪಸ್ ಪಡೆದ ನಂತರದಲ್ಲಿ ಮೊದಲಬಾರಿಗೆ ಚುನಾವಣೆ ನಡೆಯುತ್ತಿದ್ದು ಈ ಬಾರಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳಿಗೆ ಅಧಿಕಾರ ಸಿಗುತ್ತದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸ್ವತಂತ್ರವಾಗಿ ಸ್ಪರ್ಧೆ ಮಾಡಿದೆ. ಇನ್ನೂ ಕಾಂಗ್ರೆಸ್ ನ್ಯಾಷನಲ್ ಕಾನ್ಫರೆನ್ಸ್ ನ ಫಾರುಖ್ ಅಬ್ದುಲ್ಲಾ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ( ಪಿಡಿಪಿ ) ಮೊಹಬೂಬ ಮುಫ್ತಿ ಸ್ವತಂತ್ರ ಸ್ಪರ್ಧೆ ಮಾಡಿದ್ದು ಕಾಂಗ್ರೆಸ್ ಕೂಟ ಸೇರುವ ಸಾಧ್ಯತೆ ಇದೆ.


