ಕ್ರಿಕೆಟಿಗ ರಿಷಬ್ ಪಂತ್ ಕಾರು ಭೀಕರ ಅಪಘಾತ – ಸ್ಥಿತಿ ಗಂಭೀರ
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ರಿಷಬ್ ಪಂತ್ ಕಾರು ಭೀಕರ ಅಪಘಾತವಾಗಿದ್ದು ತಲೆ ಹಾಗೂ ಬೆನ್ನಿಗೆ ತೀವ್ರ ಪೆಟ್ಟಾದ ಹಿನ್ನಲೆ ಸ್ಥಿತಿ ಗಂಭೀರವಾಗಿದೆ
ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿಯಾದ ರಭಸಕ್ಕೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ ಎಂದು ಹೇಳಲಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಿಷಬ್ ಪಂತ್ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ.
ತಲೆ, ಬೆನ್ನು ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ರಿಷಭ್ ಪಂತ್ ಇತ್ತೀಚೆಗಷ್ಟೆ ಬಾಂಗ್ಲಾ ವಿರುದ್ಧದ ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಬಳಿಕ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗಿಳಿದಿದ್ದಾರೆ.