ಬೆಂಗಳೂರು : ಆಡಳಿತ ಯಂತ್ರಕ್ಕೆ ಚುರುಕು ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಪೊಲೀಸ್‌ ಇಲಾಖೆಗೆ ಸರ್ಜರಿ ನಡೆಸಿದೆ. ಹಲವು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. 34 ಮಂದಿ ಐಪಿಎಸ್‌ ಅಧಿಕಾರಿಗಳನ್ನು ಬೇರೆ ಹುದ್ದೆ, ಸ್ಥಳಗಳಿಗೆ ವರ್ಗಾಯಿಸಲಾಗಿದೆ.

ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರೋಹನ್ ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಅಪರಾಧ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಅಜಯ್‌ ಹಿಲೋರಿ, ಸಂಜಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಕಾರ್ತಿಕ್‌ ರೆಡ್ಡಿ, ಸಂಚಾರ ವಿಭಾಗದ ಬೆಂಗಳೂರು ಪಶ್ಚಿಮ ಆಯುಕ್ತ ಅನೂಪ್‌ ಶೆಟ್ಟಿ, ಬೆಂಗಳೂರು ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್‌ ದೇವರಾಜು, ಸಿಐಡಿ ಎಸ್‌ಪಿ ಸೈದಲು ಅಡವಾತ್‌ ವರ್ಗಾವಣೆಗೊಂಡ ಪ್ರಮುಖ ಅಧಿಕಾರಿಗಳಾಗಿದ್ದಾರೆ.