ವೈರಲ್ ಆಯ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಖಾಸಗಿ ಪೋಟೋ – Rohini Sindhoori
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಡಿ. ರೂಪಾ ನಡುವಿನ ಜಗಳ ತಾರಕಕ್ಕೆ ಏರಿದ್ದು ರೋಹಿಣಿ ಅವರ ಖಾಸಗಿ ಪೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.
ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಜೊತೆಗಿನ ಜಗಳದ ಮೂಲಕ ನಿರಂತರ ಸಿದ್ದಿಯಲ್ಲಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಖಾಸಗಿ ಪೋಟೋಗಳನ್ನು ಇಂದು ಐಪಿಎಸ್ ಅಧಿಕಾರಿ ಡಿ. ರೂಪಾ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದು ಹಲವು ಪ್ರಶ್ನೆಗಳನ್ನು ಮಾಡಿದ್ದಾರೆ.
ಈ ಕುರಿತು ಡಿ. ರೂಪಾ ತಮ್ಮ ಫೇಸ್ಬುಕ್ ಪುಟದಲ್ಲಿ ಎರಡು ಪೋಸ್ಟ್ ಹಾಕಿದ್ದು ರೋಹಿಣಿ ಖಾಸಗಿ ಪೋಟೋ ಹಾಕುವ ಮೂಲಕ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ರೋಹಿಣಿ ಜೆಡಿಎಸ್ ಶಾಸಕ ಸಾರಾ ಮಹೇಶ್ ಜೊತೆ ಸಂದಾನ ಮಾಡಿಕೊಂಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿತ್ತು.
ಐಪಿಎಸ್ ಅಧಿಕಾರಿ ಡಿ. ರೂಪ ಅವರು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡುವ ಮೂಲಕ ಕಿಚ್ಚು ಹಚ್ಚಿದ್ದರು. ಈಗ ರೂಪ ಅವರು ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳನ್ನು ಹರಿಬಿಟ್ಟಿದ್ದಾರೆ. ಇನ್ನು ಮತ್ತೊಂದೆಡೆ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಫೋಸ್ಟ್ ವಾರ್ ಮುಂದುವರಿದಿದೆ.
ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ ಒಂದಲ್ಲ, ಎರಡಲ್ಲ, ಅನೇಕರಿಗೆ ತನ್ನ ಅಶ್ಲೀಲ ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಪಿಕ್ಸ್ಗಳು ನನಗೆ ಸಿಕ್ಕಿವೆ. ಇದು ಖಾಸಗಿ ವಿಷಯ ಆಗುವುದಿಲ್ಲ.
ಆಲ್ ಇಂಡಿಯಾ ಸರ್ವಿಸ್ ಕಂಡಕ್ಟ್ ರೂಲ್ಸ್ ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಪಿಕ್ಸ್, ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾ ಸತ್ಯತೆ ಹೊರ ಬರಬೇಕಿದೆ ಎಂದು ಆರೋಪಿಸಿದ್ದಾರೆ