ಬಿಜೆಪಿ ಸೇರುತ್ತಾರಾ ರೋಹಿತ್ ಶರ್ಮಾ ; ಮಹಾ ಸಿಎಂ ಭೇಟಿ
ಮುಂಬೈ : ಭಾರತೀಯ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟರ್ ಹಾಗೂ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಮಹಾರಾಷ್ಟ್ರ ಸಿಎಂ ದೇವೆಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿದ್ದು, ಕುತೂಹಲ ಮೂಡಿಸಿದೆ.
ಈಗಷ್ಟೇ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಮಹಾರಾಷ್ಟ್ರ ಸಿಎಂ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಫಡ್ನವಿಸ್ ರೋಹಿತ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ.
ತನ್ನ ವಿಭಿನ್ನ ಆಟದ ಶೈಲಿಯಿಂದ ಭಾರತ ಕ್ರಿಕೆಟ್ ತಂಡದಲ್ಲಿ ಯಶಸ್ವಿಯಾಗಿ ಗುರುತಿಸಿಕೊಂಡ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡ ಟಿ – ಟ್ವೆಂಟಿ ಹಾಗೂ ಏಕದಿನ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ.


