ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣ ; ಮೂವರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ : ತಹಶಿಲ್ದಾರ ಕಚೇರಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ತಹಶಿಲ್ದಾರ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ಮೇಲೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ವರ್ಗಾವಣೆ ವಿಚಾರವಾಗಿ ರುದ್ರಣ್ಣ ಅವರಿಂದ ಹಣ ಪಡೆದು ನಂತರ ಬೇರೆಡೆಗೆ ವರ್ಗಾವಣೆ ಮಾಡಿದ್ದ ಹಿನ್ನಲೆಯಲ್ಲಿ ನೌಕರ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.
ಮಂಗಳವಾರ ಬೆಳಿಗ್ಗೆ ನಗರದ ತಹಶಿಲ್ದಾರ ಕಚೇರಿಯಲ್ಲೇ ರುದ್ರಣ್ಣ ಯಡವಣ್ಣವರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುಂಚಿತವಾಗಿ ತಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದರು.