
ಸಚಿವೆ ಹೆಬ್ಬಾಳಕರ್ ಗೆ ವಿಶೇಷ ಉಡುಗೊರೆ ; ಏನು ಹೇಳಿದ್ರು ನಟ ಸಾಧು ಕೋಕಿಲ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಮುಂದಿನ ತಿಂಗಳು ಸಚಿವರ ಜನ್ಮದಿನದ ಅಂಗವಾಗಿ ವಿಶೇಷ ಉಡುಗೊರೆ ನೀಡಲು ಸಿದ್ಧರಾಗಿದ್ದೇವೆ ಎಂದು ಹಿರಿಯ ನಟ ಸಾಧು ಕೋಕಿಲ ಅಭಿಪ್ರಾಯಪಟ್ಟರು.
ಬುಧವಾರ ನಗರದ ಖಾಸಗಿ ಆಸ್ಪತ್ರೆಗೆ ಭೇಟಿನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ ನಂತರ ಪ್ರತಿಕ್ರಿಯೆ ನೀಡಿದ ಇವರು. ಸಚಿವರು ಆದಷ್ಟು ಬೇಗ ಗುಣಮುಖರಾಗಿ ಎಂದಿನಂತೆ ಕರ್ತವ್ಯಕ್ಕೆ ಮರಳಲಿದ್ದಾರೆ. ಮುಂದಿನ ತಿಂಗಳಲ್ಲಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಿದ್ದೇವೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಜರುಗಿದ ಗಾಂಧಿ ಭಾರತ ಕಾರ್ಯಕ್ರಮದ ಕುರಿತು ಮಾತನಾಡಿದ ಇವರು. ಜೈಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಯಶಸ್ವಿಯಾಗಿದೆ. ನೂರು ವರ್ಷಗಳ ಹಿಂದೆ ಕಾಂಗ್ರೆಸ್ ಅಧಿವೇಶನವನ್ನು ಮಹಾತ್ಮಾ ಗಾಂಧಿಯವರು ನಡೆಸಿದ್ದರು. ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದಿದ್ದು ಸಂತೋಷ ತರಿಸಿದೆ ಎಂದರು.