
ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.
ಈ ಕುರಿತಾಗಿ ಸಂಜಯ್ ಪಾಟೀಲ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ಮನೆ ಎದುರು ಪ್ರತಿಭಟನೆ ಮಾಡಿದ್ದರು
ಇನ್ನೂ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಂಜಯ್ ಪಾಟೀಲ್,
‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಅತೀ ಹೆಚ್ಚು ಮಹಿಳೆಯರು ಸಮಾವೇಶದಲ್ಲಿ ಭಾಗಿಯಾಗಿದ್ದೀರಿ, ಇದರಿಂದ ಅವರಿಗೆ ಇಂದು ರಾತ್ರಿ ನಿದ್ದೆ ಬರುವುದಿಲ್ಲ.
ಅದರಲ್ಲೂ ಇಂದು ರಮೇಶ್ ಜಾರಕಿಹೊಳಿ ಕೂಡ ಪ್ರಚಾರಕ್ಕೆ ಬಂದಿದ್ದರಿಂದ ಮಾತ್ರೆ ಜೊತೆಗೆ ಒಂದು ಪೆಗ್ ಎಕ್ಸ್ಟ್ರಾ ಹಾಕಿಕೊಳ್ಳಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.