ನನ್ನ ಸಾವಿಗೆ ಈಶ್ವರಪ್ಪ ಕಾರಣ : ಯುವ ಉದ್ಯಮಿ ಆತ್ಮಹತ್ಯೆ
ಬೆಳಗಾವಿ : ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಾಲ್ಕು ಕೋಟಿ ಕಾಮಗಾರಿ ಹಣವನ್ನು ನೀಡಲು ಸಚಿವ ಈಶ್ವರಪ್ಪ ಹಾಗೂ ಅವರ ಸಂಗಡಿಗರು 40 ಪ್ರತಿಶತ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಚಿವ ಈಶ್ವರಪ್ಪ ಕಮಿಶನ್ ಬಳಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ದೂರು ನೀಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಂಶಯ ವ್ಯಕ್ತವಾಗಿದ್ದು, ವಿಷ ಸೇವನೆ ವಸತಿ ಗೃಹದಲ್ಲಿ ವಿಷ ಸೇವನೆ ಮಾಡಿದ್ದಾರೆಂದು ತಿಳಿದು ಬಂದಿದೆ.