ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ; ಸಪ್ತಸಾಗರ ಶಾರದಾ ಶಾಲೆ ಉತ್ತಮ ಸಾಧನೆ
ಅಥಣಿ: ಶಾಲಾ ಶಿಕ್ಷಣ ಇಲಾಖೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಅಥಣಿ ತಾಲೂಕಿನ ದರೂರ ಕ್ಲಸ್ಟರ್ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ದರೂರ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಜರುಗಿದವು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ತಾಲೂಕಿನ ಸಪ್ತಸಾಗರ ಗ್ರಾಮದ ಶಾರದಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಮಕ್ಕಳು ಭಾಗವಹಿಸಿ ಅದ್ಭುತ ಸಾಧನೆ ಮಾಡಿದ್ದಾರೆ.
ಗುಂಪು ಕ್ರೀಡಾಕೂಟ : ಗುಂಪು ಆಟಗಳಾದ ಬಾಲಕರ ಕಬಡ್ಡಿ ತಂಡ ಪ್ರಥಮ ಸ್ಥಾನ ಮತ್ತು 400 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕಿಯರ ಥ್ರೋಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವೈಯಕ್ತಿಕ ಕ್ರೀಡಾಕೂಟ : ವೈಯಕ್ತಿಕ ಪಂದ್ಯಗಳಲ್ಲಿ ಭಾಗ್ಯಶ್ರೀ ಸುರೇಶ ಆಲಗೂರ 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಹಾಗೂ ನಾಗರಾಜ ಕಲ್ಲಪ್ಪಾ ದುರದುಂಡಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರೀತಿ ಬಾಹುಬಲಿ ಠಗರಿ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತದಲ್ಲಿ ತೃತೀಯ ಸ್ಥಾನ.
ಅಶ್ವಥ ಮಲ್ಲಪ್ಪಾ ತೇಲಿ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಸಮೀರ ಹಸನ ನದಾಫ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಮಂಜುನಾಥ ರಾವಸಾಬ ಹವಾಲ್ದಾರ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಮತ್ತು ಪ್ರತೀಕ್ಷಾ ರವಿ ಕಾಂಬಳೆ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಸಪ್ತಸಾಗರ ಗ್ರಾಮಕ್ಕೆ ಹಾಗೂ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ ಹಳ್ಳೂರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಉತ್ತಮ ಕ್ರೀಡಾ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದರು.
ಈ ಶಾಲೆಗೆ ಕ್ರೀಡಾಪಟುಗಳ ಮೇಲ್ವಿಚಾರಕರಾಗಿ ಮಹಮ್ಮದ ನದಾಫ ಹಾಗೂ ಪೂಜಾ ಮಠಪತಿ ಕಾರ್ಯನಿರ್ವಹಿಸಿದರು. ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ, ಮುಖ್ಯೋಪಾಧ್ಯಾಯರು ಸೇರಿದಂತೆ ಶಿಕ್ಷಕ ವೃಂದದವರಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.


