ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ
ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಖ್ಯಾತ ಜ್ಯೋತಿಷಿ ಚಂದ್ರಶೇಖರ ಗುರೂಜಿ ಅವರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ಹೋಟೆಲ್ ಮುಂಭಾಗದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆಗೆ ಡಾ.ಚಂದ್ರಶೇಖರ್ ಗುರೂಜಿ ಮೇಲೆ ದಾಳಿ ನಡೆಸಿದ. ಅನಾಮಿಕ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ
ಮೃತದೇಹವನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಲಾಬೂರಾಮ್ ಭೇಟಿ ನೀಡಿದ್ದಾರೆ. ವ್ಯಾಪಾರದ ಬಗ್ಗೆ ಚರ್ಚಿಸಲು ಚಂದ್ರಶೇಖರ್ ಗುರೂಜಿ ಹುಬ್ಬಳ್ಳಿಗೆ ಬಂದಿದ್ದರು. ಕೊಲೆಗೆ ಕಾರಣ ಮತ್ತು ಆರೋಪಿಯ ಬಗ್ಗೆ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಚೂರಿ ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದರು. ನಂತರ ರಕ್ತಸ್ರಾವದಿಂದ ಮೃತಪಟ್ಟರು.