ಹಿಂದೂ ಶಬ್ದದ ಅರ್ಥ ಅಶ್ಲೀಲ : ಹೇಳಿಕೆ ಹಿಂಪಡೆದ ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ : ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಮಾತನ್ನು ವಾಪಸ್ ಪಡೆದಿದ್ದು, ಆ ಹೇಳಿಕೆಯಿಂದ ಯಾರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ನಿಪ್ಪಾಣಿಯಲ್ಲಿ ಮಾನವ ಬಂದುತ್ವ ವೇದಿಕೆ ಏರ್ಪಡಿಸಿದ್ದ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದ ಇವರು. ಹಿಂದೂ ಪದದ ಮೂಲ ಪರ್ಷಿಯನ್ ಬಾಷೆಯಿಂದ ಬಂದಿದೆ. ಇಲ್ಲಿ ಈ ಪದದ ಅರ್ಥ ಅಶ್ಲೀಲವಾಗಿದ್ದು ಇದನ್ನು ನಮ್ಮ ಮೇಲೆ ಹೇರಿಕೆ ಮಾಡಲಾಗಿದೆ ಎಂದು ಹೇಳಿದ್ದರು. ಸತೀಶ್ ಜಾರಕಿಹೊಳಿ ಹೇಳಿಕೆ ವಿವಾದ ಹುಟ್ಟುಹಾಕಿದ್ದು ಮಾತ್ರವಲ್ಲದೆ, ರಾಜ್ಯಾದ್ಯಂತ ಸಾರ್ವಜನಿಕರ ಆಕ್ರೋಶ ವ್ಯಕ್ತವಸಗಿತ್ತು. ಇದನ್ನು ಮನಗಂಡು ತಮ್ಮ ತಪ್ಪಿನ ಅರಿವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.