ಸತೀಶ್ ಜಾರಕಿಹೊಳಿ “ಹಿಂದೂ” ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಕರೆ
ಬೆಳಗಾವಿ : ಮಾಜಿ ಸಚಿವ ಹಾಗೂ ಎಐಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹಿಂದೂ ಪದದ ಅರ್ಥ ಕುರಿತಾಗಿ ನೀಡಿರುವ ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.
ಈ ಕುರಿತು ನಿರ್ಧಾರ ಕೈಗೊಂಡಿರುವ ಬೆಳಗಾವಿ ಬಿಜೆಪಿ. ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆ ವಾಪಸ್ ಪಡೆದು ಹಿಂದೂಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ. ಇಂದು ಮಧ್ಯಾಹ್ನ ಬೆಳಗಾವಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.
ಇಷ್ಟಕ್ಕೆ ಸುಮ್ಮನಾಗದ ಬಿಜೆಪಿ ಇದನ್ನು ರಾಜ್ಯಮಟ್ಟದ ಹೋರಾಟವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯರೂಪಿಸುತ್ತಿದೆ. ಜೊತೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ.