ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಶಾಸಕ ಅಭಯ್ ಪಾಟೀಲ್ ಅಕ್ರಮ ; ಗುಡುಗಿದ ಸಾಹುಕಾರ
ಬೆಳಗಾವಿ : ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ಶಾಸಕ ಅಭಯ್ ಪಾಟೀಲ್ ಅಕ್ರಮ ಎಸಗಿದ್ದು, ಬೆಳಗಾವಿ ಸ್ಮಾರ್ಟ್ ಆಗದಿದ್ದರು ಅಭಯ್ ಪಾಟೀಲ್ ಸ್ಮಾರ್ಟ್ ಆಗಿದ್ದಾನೆ ಎಂದು ಆರೋಪ ಮಾಡಿದ್ದಾರೆ.
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ವಿರುದ್ಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಅಭಯ ಪಾಟೀಲ್ ಕಾಂಗ್ರೆಸ್ ಸರ್ಕಾರ, ಸಚಿವರ ಬಗ್ಗೆ ಟೀಕಿಸಿದ ವಿಚಾರಕ್ಕೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಅಭಯ ಪಾಟೀಲ್ ಗೆ ಕಾಂಗ್ರೆಸ್ ಸರ್ಕಾರ, ಬೆಳಗಾವಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.
ಬೆಳಗಾವಿ ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಸಾಕಷ್ಟು ಅಕ್ರಮ ಏಸಗಿದ್ದಾನೆ. ಬೆಳಗಾವಿ ಮಾತ್ರ ಸ್ಮಾರ್ಟ್ ಆಗದೆ ಹಾಗೇ ಉಳಿದಿದೆ. ಆದರೆ ಅಭಯ ಪಾಟೀಲ್ ಸ್ಮಾರ್ಟ್ ಆಗಿದ್ದಾರೆ. ಮಹಾನಗರ ಪಾಲಿಕೆಯಲ್ಲೂ ಅಕ್ರಮ ಮಾಡಿದ್ದಾರೆ ಎಂದು ಟಾಂಗ್ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಕೆಪಿಸಿಸಿ ಸದಸ್ಯ ಕಿರಣ ಸಾಧುನ್ನವರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದ್ದರು.