Select Page

Advertisement

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಪ್ರಕರಣ

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಪ್ರಕರಣ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ನೀಡಿದೆ.

2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಮತ್ತು ಅಂಬೇಡ್ಕರ್ ಸಮಾರಂಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದ ಪರ್ಷಿಯಾದಿಂದ ಬಂದಿದ್ದು, ಅದು ನಮ್ಮದಲ್ಲ; ಅದಕ್ಕೆ ಅಶ್ಲೀಲವೆನಿಸುವಂಥ ಅರ್ಥಗಳಿವೆ ಅಂತ ತಿಳಿಸಿದ್ದರು.

ಈ ನಡುವೆ ಅವರು ನಾವು ಹಿಂದೂಗಳು ಎಂದು ಬೀಗುವ ಇಂದಿನ ಯುವಕರು ತಮ್ಮ ವಾಟ್ಸ್ ಆಯಪ್ ಗಳಲ್ಲಿ, ಗೂಗಲ್ ನಲ್ಲಿ, ವಿಕಿಪೀಡಿಯಾದಲ್ಲಿ ಹಿಂದೂ ಎಂಬ ಪದದ ಅರ್ಥ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಆ ಪದವನ್ನು ನಮ್ಮ ಮೇಲೆ ಏಕೆ ಬಲವಂತವಾಗಿ ಹೇರಿದರು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಅಂತ ತಿಳಿಸಿದ್ದರು.

ಈ ನಡುವೆ ವಕೀಲ ದಿಲೀಪ್ ಕುಮಾರ್ ಎಂಬುವವರು ನೀಡಿದ್ದ ಖಾಸಗಿ ದೂರಿನ ಪ್ರಕರಣದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಚಿವ ಜಾರಕಿಹೊಳಿ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶವನ್ನು ನೀಡಿದೆ.

Advertisement

Leave a reply

Your email address will not be published. Required fields are marked *

error: Content is protected !!