Select Page

Advertisement

ವಲಸಿಗ ಅಭ್ಯರ್ಥಿಗೆ ಕಾಂಗ್ರೆಸ್ ನಲ್ಲೇ ವಿರೋಧ..! ಸಾಹುಕಾರ್ ಗೇಮ್ ಪ್ಲ್ಯಾನ್ ಏನು…?

ವಲಸಿಗ ಅಭ್ಯರ್ಥಿಗೆ ಕಾಂಗ್ರೆಸ್ ನಲ್ಲೇ ವಿರೋಧ..! ಸಾಹುಕಾರ್ ಗೇಮ್ ಪ್ಲ್ಯಾನ್ ಏನು…?

ಬೆಳಗಾವಿ : ಲೋಕಸಭಾ ಚುನಾವಣೆ ಜ್ವರ ನಿಧಾನಗತಿಯಲ್ಲಿ ಹೆಚ್ಚಾಗುತ್ತಿದ. ಈ ಮಧ್ಯೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ವಲಸಿಗ ಅಭ್ಯರ್ಥಿಗಳಿಗೆ ಲೋಕಸಭಾ ಚುನಾವಣೆಯಲ್ಲಿ ಅವಕಾಶ ಕಲ್ಪಿಸಿದರೆ ಕೈ ಪಕ್ಷದ ಒಳಗಡೆಯೇ ವಿರೋಧ ವ್ಯಕ್ತವಾಗುವ ಸಾಧ್ಯತೆ ದಟ್ಟವಾಗಿದೆ.

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ತನ್ನದೇ ಹಿಡಿತ ಹೊಂದಿರುವ ಜಾರಕಿಹೊಳಿ ಸಹೋದರರು ಮನಸ್ಸು ಮಾಡಿದರೆ ಎಂತಹುದೇ ಸಮೀಕರಣ ಬದಲಿಸುವ ಶಕ್ತಿ ಹೊಂದಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೂಡಾ ಸಚಿವ ಸತೀಶ್ ಜಾರಕಿಹೊಳಿ ಲೋಕಸಭಾ ಚುನಾವಣಾ ಸ್ಪರ್ಧೆ ಅನಿವಾರ್ಯ ಎಂಬ ಸ್ಥಿತಿಗೆ ಬಂದು ತಲುಪಿದೆ. ಪ್ರಭಲ ಬಿಜೆಪಿ ವಿರುದ್ಧ ತೊಡೆ ತಟ್ಟುವ ಶಕ್ತಿ ಇರುವುದು ಕಾಂಗ್ರೆಸ್ ನಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಇರುವುದಂತು ಸುಳ್ಳಲ್ಲ.

ಈಗಾಗಲೇ ರಾಜ್ಯ ಸರ್ಕಾರದಲ್ಲಿ ಪ್ರಬಲ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಕಾಣಕ್ಕೆ ತಳ್ಳುವುದು ಅವರ ಬೆಂಬಲಿಗರಿಗೆ ಹಾಗೂ ಬೆಳಗಾವಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮನಸ್ಸಿಲ್ಲ. ಇದೇ ಕಾರಣಕ್ಕಾಗಿ ಸತೀಶ್ ಜಾರಕಿಹೊಳಿ ಅವರಿಗೆ ಲೋಕಸಭಾ ಟಿಕೆಟ್ ನೀಡದಂತೆ ಆಗ್ರಹವೂ ಹೆಚ್ಚಾಗಿದೆ. ಇನ್ನೂ ಇವರು ಸ್ಪರ್ಧಿಸದಿದ್ದರೆ ಬೇರೆ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲದಲ್ಲಿ ಕಾಂಗ್ರೆಸ್ ಇರುವುದು ಸ್ಪಷ್ಟ.

ವಲಸಿಗ ಅಭ್ಯರ್ಥಿಗೆ ಕಾಂಗ್ರೆಸ್ ನಲ್ಲೇ ವಿರೋಧ….? ಸತೀಶ್ ಜಾರಕಿಹೊಳಿ ಲೋಕಸಭೆಗೆ ಸ್ಪರ್ಧಿಸದೆ ಇದ್ದರೆ ಬೇರೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಮೂಡಿದೆ. ಆದರೆ ವಲಸಿಗರನ್ನು ಅಭ್ಯರ್ಥಿ ಮಾಡಲು ಕೆಲವರು ಪ್ರಯತ್ನ ನಡೆಸಿದ್ದು ಇದಕ್ಕೆ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗುವ ಸಾಧ್ಯತೆ ದಟ್ಟವಾಗಿದೆ. ಪಕ್ಷದ ಪ್ರಾಥಮಿಕ ಸದಸ್ಯರೇ ಅಲ್ಲದವರನ್ನು ಅಭ್ಯರ್ಥಿ ಮಾಡಿದರೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ತಂಡ ಖಂಡಿತ ವಿರೋಧ ಮಾಡುತ್ತೆ ಎನ್ನುತ್ತದೆ ಒಂದು ವರ್ಗ.

ಈಗಾಗಲೇ ಕಳೆದ ದಶಕಗಳಿಂದ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷ ಕಟ್ಟುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಏಕಾಏಕಿ ಚುನಾವಣೆ ದೃಷ್ಟಿಯಿಂದ ಹೊಸ ಅಭ್ಯರ್ಥಿ ಪೋಷಣೆ ಮಾಡುವುದಾದರೆ ನಿಷ್ಠಾವಂತ ಕಾರ್ಯಕರ್ತರ ಪಾಡು ಏನು ಎಂಬ ಪ್ರಶ್ನೆ ಕೂಡಾ ಅನೇಕರಲ್ಲಿ ಮೂಡಿದೆ.‌ ಈ ಎಲ್ಲಾ ಕಾರಣದಿಂದ ಪಕ್ಷದ ಪ್ರಾಥಮಿಕ ಸದಸ್ಯರೇ ಅಲ್ಲದವರಿಗೆ ಟಿಕೆಟ್ ಕೊಟ್ಟರೆ ಅನಾಯಾಸವಾಗಿ ಬಿಜೆಪಿಗೆ ಲಾಭ ಮಾಡಿಕೊಟ್ಟಂತೆ ಆಗುತ್ತದೆ ಎನ್ನುತ್ತಾರೆ ಕೆಲವರು.

ಸಾಹುಕಾರ್ ಅನಿವಾರ್ಯವಾ…..? ಈಗಾಗಲೇ ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಯ ಲಾಭದಲ್ಲಿರುವ ಕೋಟ್ಯಾಂತರ ಜನರ ಮತಗಳನ್ನು ಪಡೆದು ಮತ್ತೊಮ್ಮೆ ಲೋಕ ಕದಣ ಗೆಲ್ಲುವ ಉತ್ಸಾಹದಲ್ಲಿ ಕಾಂಗ್ರೆಸ್ ಇದೆ. ಆದರೆ ಬಿಜೆಪಿ ಭಧ್ರಕೋಟೆಯಾದ ಬೆಳಗಾವಿ ಕ್ಷೇತ್ರ ಗೆಲ್ಲಬೇಕಾದರೆ ಪ್ರಬಲ ಅಭ್ಯರ್ಥಿ ಅನಿವಾರ್ಯ. ಕಳೆದ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸತೀಶ್ ಜಾರಕಿಹೊಳಿ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದ್ದರು.

ಕಳೆದ 2019 ರ ಲೋಕಸಭಾ ಚುನಾವಣೆಯಲ್ಲಿ ಮೂರು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಪಕ್ಷ, ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಬಿರುಗಾಳಿಗೆ ಸಿಲುಕಿ ಕೇವಲ ಐದು ಸಾವಿರ ಅಂತರಕ್ಕೆ ತಲುಪಿದ್ದು ಸಧ್ಯ ಇತಿಹಾಸ. ಆದರೆ ಬರುವ ಲೋಕಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಬಿಟ್ಟು ಹೊರಗಿನವರು ಅಭ್ಯರ್ಥಿಯಾದರೆ ಗೆಲುವು ವಿರಳ ಎಂದು ಹೇಳಲಾಗುತ್ತಿದೆ.

Advertisement

Leave a reply

Your email address will not be published. Required fields are marked *

error: Content is protected !!