Select Page

Advertisement

ಸಚಿವರ ಬಳಿ ಸಮಸ್ಯೆ ಹೊತ್ತುಬಂದ ಜನಸಮೂಹ

ಸಚಿವರ ಬಳಿ ಸಮಸ್ಯೆ ಹೊತ್ತುಬಂದ ಜನಸಮೂಹ
Advertisement

ಗೋಕಾಕ: ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರವೂ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಸ್ರಾರು ಜನರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.

ಬೆಳಗಾವಿ ಜಿಲ್ಲೆಯ ಸಾರ್ವಜನಿಕರು ಸೇರಿದಂತೆ ವಿಜಯಪುರ, ಬಾಗಲಕೋಟೆ, ರಾಯಚೂರು, ಹೊಸಪೇಟೆ ಸೇರಿದಂತೆ ಅನೇಕ ಜಿಲ್ಲೆಗಳ ಜನರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿಗಳನ್ನು ಸಲ್ಲಿಸಿದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಪ್ರಿಯಂಕಾ ಜಾರಕಿಹೊಳಿ ಅವರು ಜಯಗಳಿಸಿದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ರೈತ ಸಂಘದ ಪದಾಧಿಕಾರಿಗಳು ಸಚಿವರನ್ನು ಸತ್ಕರಿಸಿದರು.

ಅಥಣಿ ತಾಲೂಕಿನ ಕಕಮರಿಯ ಗುರುದೇವ ಆಶ್ರಮದ ಶ್ರೀ ಆತ್ಮಾರಾಮ ಸ್ವಾಮೀಜಿ, ತೆಲಸಂಗ ಕುಂಬಾರ ಜಗದ್ಗುರು ಗುರುಪೀಠದ ಶ್ರೀ ಬಸವ ಗುಂಡಯ್ಯ ಸ್ವಾಮೀಜಿ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸತ್ಕರಿಸಿ, ಮಠದ ಕೆಲ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಸಚಿವರ ಗಮನಕ್ಕೆ ತಂದರು.

ಜನತಾ ದರ್ಶನ ಹಿನ್ನೆಲೆಯಲ್ಲಿ ಸಹಸ್ರಾರು ಜನಕ್ಕೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಬೆಳಗ್ಗೆ10 ಗಂಟೆಯಿಂದ ನಿರಂತರ ಸಂಜೆ ನಾಲ್ಕು ಗಂಟೆಯವರೆಗೆ ಸಚಿವರು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಹಲವಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಿಲ್ ಗಾರ್ಡನ್ ಸಿಬ್ಬಂದಿಗಳು ಇದ್ದರು.

Advertisement

Leave a reply

Your email address will not be published. Required fields are marked *

error: Content is protected !!