Select Page

Advertisement

ಸಾಹುಕಾರ್ ಭೇಟಿಯಾದ ವಿಜಯೇಂದ್ರ : ರಾಜ್ಯ ರಾಜಕಾರಣದಲ್ಲಿ ಹಲ್ ಚಲ್

ಸಾಹುಕಾರ್ ಭೇಟಿಯಾದ ವಿಜಯೇಂದ್ರ : ರಾಜ್ಯ ರಾಜಕಾರಣದಲ್ಲಿ ಹಲ್ ಚಲ್

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸಾಕಷ್ಟು ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಹೌದು ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಸಚಿವ ಸತೀಶ್ ಜಾರಕಿಹೊಳಿ ಮೊನ್ನೆಅಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ದೆಹಲಿಯಿಂದ ವಾಪಸ್ ಬಂದಿದ್ದರು. ಸಧ್ಯ ವಿಜಯೇಂದ್ರ ಸಾಹುಕಾರ್ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಒಂದುವೇಳೆ ರಾಜೀನಾಮೆ ಸಂದರ್ಭ ಬಂದರೆ ಖಂಡಿತವಾಗಿ ಡಿಕೆಶಿ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ‌. ಕಾಂಗ್ರೆಸ್ ಹೈಕಮಾಂಡ್ ಕೂಡಾ ಡಿಕೆಶಿ ಮೇಲೆ ಒಲವು ಹೊಂದಿದೆ. ಈ ನಡುವೆ ಕೆಲವರು ಸಿಎಂ ಸ್ಥಾನಕ್ಕೆ ಪೈಪೋಟಿ ನೀಡಿದ್ದು ವಿಶೇಷ.

ಸಧ್ಯ ಸತೀಶ್ ಜಾರಕಿಹೊಳಿ ಹಾಗೂ ವಿಜಯೇಂದ್ರ ನಡುವಿನ ಭೇಟಿ ನಾನಾ ಕಾರಣಕ್ಕೆ ವಿಶೇಷತೆ ಹೊಂದಿದೆ. ಹಾಗೆಯೇ ಒಂದುವೇಳೆ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಕೂಗು ಎದ್ದು ಡಿಕೆಶಿ ಸಿಎಂ ಆದರೆ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವರು ಕಾಂಗ್ರೆಸ್ ಬಾಗಿಲು ಬಡಿಯುತ್ತಾರಾ ಎಂದು ಕಾದು ನೋಡಬೇಕು.

Advertisement

Leave a reply

Your email address will not be published. Required fields are marked *

error: Content is protected !!