ಸಿಎಂ ಸ್ಥಾನದ ಕುರಿತು ಮಹತ್ವದ ಹೇಳಿಕೆ ಕೊಟ್ಟ ಸಾಹುಕಾರ
ಬೆಂಗಳೂರು : ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಕೂಗು ಜೋರಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅನೇಕರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಸಿಎಂ ಸ್ಥಾನದ ಕುರಿತು ಖುದ್ದು ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಇವರು. ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ಸಧ್ಯ ಯಾವುದೇ ಬದಲಾವಣೆ ಇಲ್ಲ. ನಾನು 2028 ಕ್ಕೆ ಸಿಎಂ ಹುದ್ದೆ ಆಕಾಂಕ್ಷಿ ಎಂದು ಹೇಳುವ ಮೂಲಕ ಎಲ್ಲದಕ್ಕೂ ತೆರೆ ಎಳೆದಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಎಂಬುದು ಕೇವಲ ಊಹಾಪೋಹಗಳು. ಈ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ದಲಿತ ನಾಯಕರು ಆಗಾಗ್ಗೆ ಭೇಟಿಯಾಗುವುದು ಸಾಮಾನ್ಯ. ಆದರೆ ಸಿಎಂ ಬದಲಾವಣೆ ಕುರಿತು ಯಾವುದೇ ರೀತಿಯಲ್ಲಿ ಮಾತುಕತೆ ನಡೆದಿಲ್ಲ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರ ಅವಧಿ ಮುಗಿದಮೇಲೆ ಅಷ್ಟೇ. ಅಲ್ಲಿಯವರೆಗೆ ನಾನು ಏನು ಹೇಳುವುದಿಲ್ಲ. ಹೊರಗಿನವರು ನಾನು ಸಿಎಂ ಎಂದು ಹೇಳಬಹುದು ಆದರೆ ನಾನು ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.


