ಸಾಹುಕಾರ್ ಸತೀಶ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ವ್ಯಕ್ತಿ ಬಂಧನ
ಬೆಳಗಾವಿ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಸರಕಾರದಲ್ಲಿರುವ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಆರೋಪಿ ನರಸಿಂಹ ಮೂರ್ತಿಯನ್ನು ಮಾರ್ಕೇಟ್ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಸರಕಾರದ ವಿವಿಧ ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಆಪ್ತ ವಿಜಯ ತಳವಾರ ನರಸಿಂಹಮೂರ್ತಿ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮಾರ್ಕೆಟ್ ಪೊಲೀಸರು ಆರೋಪಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.