Select Page

ಸತೀಶ್ ಜಾರಕಿಹೊಳಿಗೆ ನೋಟಿಸ್ : ಸುರ್ಜೇವಾಲ ಸ್ಪೋಟಕ ಹೇಳಿಕೆ…!

ಸತೀಶ್ ಜಾರಕಿಹೊಳಿಗೆ ನೋಟಿಸ್ : ಸುರ್ಜೇವಾಲ ಸ್ಪೋಟಕ ಹೇಳಿಕೆ…!

ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಅವರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಊಹಾಪೋಹಗಳಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಹತ್ವದ ಹೇಳಿಕೆ ನೀಡಿದ್ದಾರೆ.

ಸತೀಶ್ ಜಾರಕಿಹೊಳಿಗೆ ಯಾರು ನೋಟಿಸ್ ಕೊಡುತ್ತಾರೆ? ಎ ಸುದ್ದಿ ಹಬ್ಬಿಸುತ್ತಿರುವುದು ಇದು ಎಲ್ಲಾ ಸುಳ್ಳು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು.

ಶುಕ್ರವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ
ಸುದ್ದಿಗಾರ ರೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವುದಿದ್ದರೇ ಯಾಕೆ ಬೆಳಗಾವಿಗೆ ಬರುತ್ತಿದ್ದೇವು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಬೆಳಗಾವಿ ಐತಿಹಾಸಿಕ ಭೂಮಿ ರಾಷ್ಟ್ರೀಯ ಕಾಂಗ್ರೆಸ್ ಋಣ ದಶಕಗಳಿಂದ ಇದೆ. ಮತ್ತೊಂದು ಸಲ ಜ. 21ಕ್ಕೆ ಜೈ ಬಾಪು, ಜೈ ಭೀಮ, ಜೈ ಸಂವಿಧಾನದ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದೇವೆ ಎಂದರು.

ಈ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಕಾಂಗ್ರೆಸ್ ನಾಯಕರು ಆಗಮಿಸಲಿದ್ದಾರೆ.

ಜೈ ಬಾಪು, ಜೈ ಭೀಮ, ಜೈ ಸಂವಿಧಾನ ಸಮಾವೇಶವನ್ನು ಕಳೆದ ಡಿಸೆಂಬರ್ 17 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿ ದೇಶದ ಜನರಿಗೆ ಅನ್ಯಾಯ ಮಾಡಿದರು‌. ಬಿಜೆಪಿ ಅವರು ಪದೇ ಪದೇ ಸಂವಿಧಾನದ ಬಗ್ಗೆ ಅಪಮಾನ ಮಾಡಿಕೊಂಡು ಬಂದಿದ್ದಾರೆ.

ದೇಶದ ಸಂವಿಧಾನದವನ್ನು ಬಿಜೆಪಿ ಬುಲ್ಡೋಜರ್ ಕೆಳಗಡೆ ಹಾಕುತ್ತಿದ್ದಾರೆ. ಆದ್ದರಿಂದ ಬಾಪು‌ ಹಾಗೂ ಅಂಬೇಡ್ಕರ್ ಅವರಿಗೆ ಗೌರವ ಕೊಡುವ ನಿಟ್ಟಿನಲ್ಲಿ ಸಮಾವೇಶ ನಡೆಸುತ್ತಿದ್ದೇವೆ. ಇದಾದ ಬಳಿಕ ಮಧ್ಯಪ್ರದೇಶದಲ್ಲಿ ಸಮಾವೇಶ ಮಾಡುತ್ತೇವೆ‌. ಇದು ಬಾಬಾಸಾಹೇಬರ್ ಜನ್ಮ ಸ್ಥಳ ಇದೆ ಎಂದರು.

ಬಿಜೆಪಿಯವರು ದಲಿತರು, ಬಡವರು, ಬುಡಕಟ್ಟು ಜನಾಂಗ, ಮಹಿಳೆರು ಹಾಗೂ ಯುವಕರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಬೆಳಗಾವಿಯಲ್ಲಿ ಧ್ವನಿ ಎತ್ತಿ ದೇಶದ ಬದಲಾವಣೆಗೆ ನಾಂದಿ ಹಾಡಲಾಗುವುದು ಎಂದರು.

ಕಳೆದ ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿಜಿ‌ ಅವರು ಸ್ವಾತಂತ್ರ್ಯ ಹೋರಾಟ ನಡೆಸುವಲ್ಲಿ ಬೆಳಗಾವಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆಸಿ ಬ್ರಿಟಿಷ್‌ರ ವಿರುದ್ಧ ಹೋರಾಟ‌ ನಡೆಸಿದ್ದರು ಎಂದರು.

ಬೆಳಗಾವಿ ‌ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ‌ಇನ್ನಿತರರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!