
ಸ್ವಪಕ್ಷದ ಸಚಿವರ ವಿರುದ್ಧ ಸಾಹುಕಾರ್ ಆಕ್ರೋಶ ; ಏನು ಕಾರಣ…?

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ನೇಮಕ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ. ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಎಲ್ಲರ ಗಮನಕ್ಕೆ ತರಬೇಕೆಂದು ಇರುವುದಿಲ್ಲ. ಆದರೆ ಮಾನವೀಯ ನೆಲೆಗಟ್ಟಿನಲ್ಲಿ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು ಎಂಬ ಮಾತು ಹೇಳಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ನೇಮಕಾತಿ ವಿಚಾರವಾಗಿ ನಡೆಯುತ್ತಿರುವ ಗೊಂದಲ ಇದಾಗಿದ್ದು, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಸಧ್ಯ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಸಿಎಂ ಆಪ್ತ ಸಚಿವರ ನಡುವಿನ ಈ ಸಮರ ಯಾವ ಹಂತಕ್ಕೆ ತಲುಪುತ್ತದೆ ಎಂದು ಕಾದು ನೋಡಬೇಕು.
ಈಗಾಗಲೇ ಬೆಳಗಾವಿ ಮಹಾನಗರ ಪಾಲಿಕೆ ಆಡಳಿತ ಚುಕ್ಕಾಣಿ ಬಿಜೆಪಿ ಕೈಯಲ್ಲಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದೆ. ಈ ನಡುವ ರಾಜ್ಯದಲ್ಲಿ ಆಡಳಿತವಿರುವ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಮಂತ್ರಿ ಗಮನಕ್ಕೆ ತರದೆ ಅಧಿಕಾರಿಗಳ ನೇಮಕ ವಿಚಾರ ಸಧ್ಯ ಇಬ್ಬರು ಸಚಿವರ ನಡುವೆ ಗುದ್ದಾಟಕ್ಕೆ ಕಾರಣವಾಗಿದೆ.