ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ
ಪಡೆಯಲು ಜನ ಅರ್ಜಿ ಸಲ್ಲಿಸಲು ಪರದಾಡುತ್ತಿರುವಾಗ ಸಧ್ಯ ನಮ್ಮ ಸರ್ವರ್ ಹ್ಯಾಕ್ ಆಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ನಮ್ಮ ಯೋಜನೆಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಸರ್ವರ್ ಗಳನ್ನು ಹ್ಯಾಕ್ ಮಾಡುತ್ತಿದೆ. ಅವೆಲ್ಲವನ್ನೂ ಸರಿಪಡಿಸುವ ಕೆಲಸ ಮಾಡುತ್ತೇವೆ. ನಮಗೆ ಎಷ್ಟೇ ತೊಂದರೆ ಕೊಟ್ಟರು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುತ್ತೇವೆ ಎಂದರು.
ಸತೀಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಂಡವರು ಈ ರೀತಿ ಮಾತನಾಡುವುದು ಎಷ್ಟು ಸರಿ?. ಸರ್ವರ್ ಹ್ಯಾಕ್ ಆಗಿದ್ದರೆ ಸೈಬರ್ ಕ್ರೈಮ್ ಗೆ ಸೇರಿ ಕಂಪ್ಲೆಂಟ್ ಮಾಡಲಿ ಎಂದು ಸಚಿವ ಸತೀಶ್ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ.


