Select Page

Advertisement

ಸಾಹುಕಾರ್ ಗೆ ಗೌರವ ಡಾಕ್ಟರೇಟ್ ; ಇನ್ಮುಂದೆ ಡಾ. ಸತೀಶ್

ಸಾಹುಕಾರ್ ಗೆ ಗೌರವ ಡಾಕ್ಟರೇಟ್ ; ಇನ್ಮುಂದೆ ಡಾ. ಸತೀಶ್

ಬೆಂಗಳೂರು : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ನೀಡಲಿದೆ.

ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರ್ಮನ್ ಡಾ. ದಾಕ್ಷಯಿಣಿ ಎಸ್. ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ.

ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನ ಮಾಡಲಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲು ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್

ಗೆಹ್ಲೋಟ್ ಒಪ್ಪಿಗೆ ನೀಡಿದ್ದು, ರಾಜ್ಯಪಾಲರ ಅಧೀನ‌ ಕಾರ್ಯದರ್ಶಿ ಬಿ.ಬಿ. ಪ್ರಶಾಂತ್ ಕುಮಾರ್ ಅವರು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗೆ ದಿನಾಂಕ:13-03-2025 ರಂದು ಪತ್ರ ಬರೆದು ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!