
ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ಸಾಧ್ಯತೆ?

ಬೆಂಗಳೂರು : ಸಧ್ಯ ಸಿದ್ದರಾಮಯ್ಯ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿರುವ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಕಳೆದ ಕೆಲ ದಿನಗಳ ಹಿಂದೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ತ್ಯಜಿಸುವ ಕುರಿತು ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಸಚಿವರಾಗಿ ಜವಾಬ್ದಾರಿ ಹೆಚ್ಚಾದ ಹಿನ್ನಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವುದು ಕಷ್ಟ ಆಗಬಹುದು ಎಂಬ ಕಾರಣಕ್ಕಾಗಿ ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತದೆ.
ಇವತ್ತು ನಡೆಯುತ್ತಿರುವ ಸಭೆಯಲ್ಲಿಯೂ ಈ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ. ಜೊತಗೆ ಸಚಿವಸ್ಥಾನದ ಜವಾಬ್ದಾರಿ ಹೊಂದಿರುವ ಕಾರಣ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ಕೆಲಸ ಮಾಡುವುದಕ್ಕೆ ತೊಂದರೆ ಆಗಬಹುದು ಎಂಬ ಲೆಕ್ಕಾಚಾರ ಇದರಲ್ಲಿ ಅಡಗಿರಬಹುದು.
ಈ ಕುರಿತು ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ. ಸಚಿವಸ್ಥಾನ ಹಿನ್ನಲೆಯಲ್ಲಿ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳಲಾಗುತ್ತಿಲ್ಲ. ಇದರಿಂದ ಬೆರೆಯವರಿಗೆ ಅವಕಾಶ ಕಲ್ಪಿಸಿ ಕೊಡಲು ಹೈಕಮಾಂಡ್ ಗೆ ಹೇಳಿರುವೆ ಎಂದಿದ್ದರು.