ಬೆಂಗಳೂರು : ದಾವಣಗೆರೆ ಉಪ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಉಂಟಾದ ಗೊಂದಲ ಹಾಗೂ ಡ್ಯಾಮೇಜ್ ಕಂಟ್ರೋಲ್ ಗೆ ಸ್ವತಃ ಸತೀಶ್ ಜಾರಕಿಹೊಳಿ ಮುಂದಾಗಿದ್ದು ಇಂದು ಡಿಸಿಎಂ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.

ಡಿಕೆ ಶಿವಕುಮಾರ ನಿವಾಸಕ್ಕೆ ತೆರಳಿದ ಸಚಿವ ಸತೀಶ್ ಜಾರಕಿಹೊಳಿ ಒಂದು ಘಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ.‌ ಅಬ್ದುಲ್ ಜಬ್ಬಾರ್ ಅಮಾನತು‌ ಕುರಿತು ಚರ್ಚೆ ನಡೆಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಜಬ್ಬಾರ್ ಅವರನ್ನು ಮರಳಿ ತರುವ ಕೆಲಸ ಆಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಪಕ್ಷದಲ್ಲಿ ಉಂಟಾದ ಗೊಂದಲಗಳನ್ನು ಸರಿಪಡಿಸುವ ಉದ್ದೇಶದಿಂದ ಈ ಕುರಿತು ಮಾತುಕತೆ ನಡೆಸಲಾಗಿದೆ. ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಒಗ್ಗಟ್ಟಿನಿಂದ ಒಯ್ಯುವ ಕಾರಣಕ್ಕೆ ಮಾತುಕತೆ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.‌