ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಅಳಿಯ ಹಾಗೂ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಸಹೋದರಿ ಪತಿ ಆಗಿರುವ ವೈ ಮಂಜುನಾಥ ಅವರು ಬೆಳಗಾವಿಯ ಹನುಮಾನ ನಗರದಲ್ಲಿರುವ ಐಷಾರಾಮಿ ನಿವಾಸ ಸೇರಿ ಒಟ್ಟು ಆರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.
ಮಂಜುನಾಥ ಅವರು ಸಧ್ಯ ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರ್ಥಿಕ ಅಕ್ರಮ ಸೇರಿದಂತೆ ನಾನಾ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.
ED ಅಧಿಕಾರಿಗಳು ಸ್ಥಳೀಯ ಪೊಲೀಸರನ್ನು ದಾಳಿಯಲ್ಲಿ ಬಳಸಿಕೊಳ್ಳದೆ ಕೇಂದ್ರ ಸರಕಾರದ ಅಧೀನದಲ್ಲಿರುವ ಹತ್ತಕ್ಕೂ ಹೆಚ್ಚು ಸಶಸ್ತ್ರ ಅರೇಸೇನಾ ಪಡೆಯ ಬಿಗಿ ಭದ್ರತೆಯಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ.
ಸಾಹುಕಾರ್ ಅಳಿಯನಿಗೆ ಶಾಕ್ ಕೊಟ್ಟ ED ; ಮನೆ, ಕಚೇರಿ ಮೇಲೆ ದಾಳಿ


