ಅಥಣಿಯಲ್ಲಿ ಕಾಂಗ್ರೆಸ್ ಮೊದಲ ವಿಕೆಟ್ ಪತನ : ಕಮಲ ತೆಕ್ಕೆಗೆ ಕುರುಬ ಸಮುದಾಯದ ಮುಖಂಡ
ಬೆಳಗಾವಿ : ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಲಕ್ಷ್ಮಣ ಸವದಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದಾರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಬೂದಿ ಮುಚ್ಚಿದ್ದ ಕೆಂಡದಂತಿದ್ದು ಸಧ್ಯ ಮೊದಲ ವಿಕೆಟ್ ಪತನವಾಗಿದೆ.
ಅಥಣಿ ಕಾಂಗ್ರೆಸ್ ಕಟ್ಟಾಳು ಹಾಗೂ ಕುರುಬ ಸಮುದಾಯದ ಮುಖಂಡ ಸತ್ಯಪ್ಪ ಭಾಗ್ಯನವರ ಮಂಗಳವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಈ ಬಾರಿ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿರಲಿಲ್ಲ. ಈ ಹಿಂದಿನಿಂದಲೂ ಲಕ್ಷ್ಮಣ ಸವದಿ ವಿರೋಧಿ ವಲಯದಲ್ಲಿ ಗುರುತಿಸಿಕೊಂಡಿದ್ದ ಇವರು ಸಧ್ಯ ಕಾಂಗ್ರೆಸ್ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ.
ಒಂದು ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಒಂದುಗೂಡಿಸಿಕೊಂಡು ಗೆಲುವಿನ ಲೆಕ್ಕಾಚಾರ ಹಾಕುತ್ತಿರುವ ಲಕ್ಷ್ಮಣ ಸವದಿ ಅವರ ವಿರುದ್ಧ ಸಾಹುಕಾರ್ ತಂತ್ರ ಹೆಣೆಯುತ್ತಿದ್ದು ಕಾಂಗ್ರೆಸ್ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.