Select Page

Advertisement

ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಸವದತ್ತಿ ಯಲ್ಲಮ್ಮ ದೇವಿ ದೇಸ್ಥಾನದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಿನ್ನಲೆಯಲ್ಲಿ ಭಾನುವಾರ ಸವದತ್ತಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು.

ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಆಗಮಿಸಿದ ಸಿಎಂ ದೇವಿ ದರ್ಶನ ಪಡೆದುಕೊಂಡರು. ನಂತರ ಇವರ ನೇತೃತ್ವದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ

ಹಾಗೂ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿರುವರು.

ನಂತರ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ. ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಹಿನ್ನಲೆಯಲ್ಲಿ ಕಳೆದ ಬೆಳಗಾವಿ ಚಳಿಗಾಲ
ಅಧಿವೇಶನ ಸಂದರ್ಭದಲ್ಲಿ ಸವದತ್ತಿ ಅಭಿವೃದ್ಧಿ ಪ್ರಾಧಿಕಾರ ಜಾರಿಗೆ ತಂದಿದ್ದ ರಾಜ್ಯ ಸರ್ಕಾರ ಈಗ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!