
ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಅನುದಾನ ; ಕೇಂದ್ರಕ್ಕೆ ಬೊಮ್ಮಾಯಿ ಧನ್ಯವಾದ

ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಯಾತ್ರಾ ಸ್ಥಳ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ 100 ಕೋಟಿ ರೂ. ಮಂಜೂರು ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಕೇಂದ್ರದ ಪ್ರಸಾದ ಯೋಜನೆ ಅಡಿಯಲ್ಲಿ ಸವದತ್ತಿ ಎಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ 100 ಕೋಟಿ ಅನುದಾನ ಬಿಡುಗಡೆ ಮಾಡಿರುವುದರಿಂದ ಈ ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯಗಳು ದೊರೆಯುವಂತಾಗಲಿದೆ. ಭಕ್ತರಲ್ಲಿ ದೇವಸ್ಥಾನದ ಬಗ್ಗೆ ಸಕಾರಾತ್ಮಕ ಭಾವನೆ ಮೂಡುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.