
ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ

ಸವದತ್ತಿ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ ಹೊಡೆದ ಘಟನೆ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ಘಟನೆ ನಡೆದಿದೆ.
ಸವದತ್ತಿಯ ಕುಮಾರೇಶ್ವರ ಶಾಲೆಗೆ 38 ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಶಾಲಾ ವಾಹನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ಬಿದ್ದಿದೆ. ಘಟನೆಯಲ್ಲಿ 12 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.