ಸವದತ್ತಿ ಯಲ್ಲಮ್ಮನಿಗೆ ಉಧೋ ಎಂದ ಪ್ರಧಾನಿ ; ಭರ್ಜರಿ ಅನುದಾನ ಘೋಷಣೆ
ಬೆಳಗಾವಿ : ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಇಲಾಖೆ ಬರೋಬ್ಬರಿ 100 ಕೋಟಿ ರು. ಅನುದಾನ ಮುಂಜೂರು ಮಾಡಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ಹೊಡರಿಸಿರುವ ಇವರು. ಜಾಗತಿಕ ಮಟ್ಟದಲ್ಲಿ ಪ್ರವಾಸಿ ಕೇಂದ್ರಗಳ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಉತ್ತರ ಕರ್ನಾಟಕ ಭಾಗದ ಶಕ್ತಿ ಪೀಠ ಸವದತ್ತಿ ಯಲ್ಲಮ್ಮ ದೇವಸ್ಥಾನ ಸಮಗ್ರ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಇಲಾಖೆ 100 ಕೋಟಿ ರು. ಅನುದಾನ ಘೋಷಣೆ ಮಾಡಿದೆ. ಇದರಿಂದ ದೇವಸ್ಥಾನ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ.
ಕರ್ನಾಟಕದಲ್ಲಿ ಅತಿಹೆಚ್ಚು ಭಕ್ತರು ಭೇಟಿನೀಡುವ ದೇವಸ್ಥಾನಗಳಲ್ಲಿ ಒಂದಾದ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರಿಗೆ ಇದರಿಂದ ಆಗುವ ಉಪಯೋಗದ ಕುರಿತು ಸಂಸದ ಜಗದೀಶ್ ಶೆಟ್ಟರ್ ಕಳೆದ ತಿಂಗಳು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದ್ದರು.
ಸಂಸದರ ಮನವಿಗೆ ಪೂರಕವಾಗಿ ಸ್ಪಂಧಿಸಿದ ಕೇಂದ್ರ ಸರ್ಕಾರ ಭರ್ಜರಿ ಸನುಧಾನ ಘೋಷಣೆ ಮಾಡಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ಅತಿದೊಡ್ಡ ಆಧ್ಯಾತ್ಮಿಕ ಕೇಂದ್ರ ಸವದತ್ತಿ ಯಲ್ಲಮ್ಮ ದೇವಸ್ಥಾನದ ಭಕ್ತರಿಗೆ ಉಪಯುಕ್ತವಾಗಲಿದೆ.