Breaking : ಸೆ. 28 ರಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನ ಸಾರ್ವಜನಿಕ ದರ್ಶನಕ್ಕೆ ಅನುಮತಿ
ಬೆಳಗಾವಿ : ಕೊವಿಡ್ – 19 ಹಿನ್ನಲೆಯಲ್ಲಿ ಕಳೆದ 2020 ರಿಂದ ಸವದತ್ತಿ ಎಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ತಡೆ ನೀಡಿಲಾಗಿದ್ದ ಆದೇಶವನ್ನು ಜಿಲ್ಲಾಧಿಕಾರಿಗಳು ಹಿಂಪಡೆದಿದ್ದು ಸೆ.28 ರಿಂದ ದರ್ಶನಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಳೆದ ವರ್ಷ ಮಾರ್ಚ್ 20 ರಿಂದ ಕೊವಿಡ್ ಲಾಕ್ ಡೌನ್ ಘೋಷಣೆ ನಂತರ ಸವದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಸಾರ್ವಜನಿಕರ ಭೇಟಿ ನೀಡುವುದನ್ನು ನಿಷೇಧಿಸಲಾಗಿತ್ತು. ನಂತರ ಇದೇ ವರ್ಷದ ಫೆಬ್ರವರಿ ತಿಂಗಳಲ್ಲಿ ಕೆಲ ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತಾದರು ನಂತರ ಕೊರೊನಾ ಮೂರನೆ ಅಲೆಯಿಂದಾಗಿ ಮತ್ತೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದರು.
ಪ್ರಮುಖ ಅಂಶಗಳು : ಮುಂದಿನ ಆದೇಶದವರೆಗೆ ಜನ ಸೇರಿ ಹಬ್ಬ, ಉತ್ಸವ ಮಾಡುವಂತಿಲ್ಲ. ಭಕ್ತರು ಸರತಿ ಸಾಲಿನಲ್ಲಿ ನಿಂತು, ಸಾಮಾಜಿಕ ಅಂತರ ಕಾಯ್ದುಕೊಂಡು ದರ್ಶನ ಪಡೆಯಬೇಕು. ದೇವಸ್ಥಾನಕ್ಕೆ ಬರುವ ಭಕ್ತರು ಒಳ ಪ್ರವೇಶ ಮಾಡುವ ಮುಂಚೆ. ದೇಹದ ಉಷ್ಣಾಂಶ ತಪಾಸಣೆ ಹಾಗೂ ಸ್ಯಾನಿಟೈಸರ್ ಒದಗಿಸುವುದು. ಜನಜಂಗುಳಿ ಸೇರಿದಂತೆ ಕ್ರಮವಹುಸಬೇಕು ಸೇರಿದಂತೆ ಅನೇಕ ನಿಬಂಧನೆಗಳನ್ನು ಹೇರಲಾಗಿದೆ.
ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಸವದತ್ತಿ ಎಲ್ಲಮ್ಮ ದೇವಸ್ಥಾನ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ವ್ಯಾಪಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಒಂದುವರೆ ವರ್ಷದಿಂದ ಅಂಗಡಿ ಬಾಗಿಲು ಹಾಕಿಕೊಂಡಿದ್ದ ವ್ಯಾಪಾರಸ್ಥರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಒಟ್ಟಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಜಿಲ್ಲಾಧಿಕಾರಿಗಳು ಅವಕಾಶ ಕಲ್ಲಿಸಿದ್ದು ಎಲ್ಲರಲ್ಲೂ ಸಂತಸ ಉಂಟುಮಾಡಿದೆ.