
ಸವದಿ ಕೈ ನಾಯಕನ ಪಾಲು : ಬೆಂಗಳೂರಿಗೆ ಕರೆದೊಯ್ದ ಕಾಂಗ್ರೆಸ್ ನಾಯಕ

ಬೆಳಗಾವಿ : ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶಗೊಂಡ ಲಕ್ಷಣ ಸವದಿ ಕಾಂಗ್ರೆಸ್ ಸೇರ್ಪಡೆ ಖಚಿತವಾದಂತೆ ಕಾಣುತ್ತಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.
ಹೌದು ಬೆಳಗಾವಿಯಿಂದ ಬೆಂಗಳೂರಿಗೆ ಹೊರಟ ಲಕ್ಷಣ ಸವದಿ ಇಂದು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಇವರ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ ಕೂಡಾ ತೆರಳಿದ್ದಾರೆ.
ಅಥಣಿಯಲ್ಲಿ ನಿನ್ನೆ ನಡೆದಿದ್ದ ಸ್ವಾಭಿಮಾನಿ ಸಮಾವೇಶದಲ್ಲಿ ಬಿಜೆಪಿ ವತೊರೆಯುವ ಮಾತನ್ನು ಸವದಿ ಆಡಿದ್ದರು. ಬರುವ ಭಾನುವಾರ ಸವದಿ ಕಾಂಗ್ರೆಸ್ ಸೇರ್ಪಡೆ ಖಚಿತ ಎಂದು ಹೇಳಲಾಗುತ್ತಿದೆ.