
ಮಳೆ ಹಿನ್ನಲೆ ಖಾನಾಪುರ ತಾಲೂಕಿನ ಕೆಲವು ಶಾಲೆಗಳಿಗೆ ಒಂದು ದಿನ ರಜೆ ಘೋಷಣೆ

ಖಾನಾಪುರ : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಖಾನಾಪುರ ತಾಲೂಕಿನ 11 ಕ್ಲಷ್ಟರ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಬಿಇಒ ಲಕ್ಷ್ಮಣರಾವ್ ಯಕ್ಕುಂಡಿ ತಿಳಿಸಿದ್ದಾರೆ.
ನಾಳೆಯಿಂದ ಶುಕ್ರವಾರ ದಿನಾಂಕ 15/07/2022 ರಂದು ಒಂದು ದಿನದ ಮಟ್ಟಿಗೆ ಖಾನಾಪುರ ತಾಲ್ಲೂಕಿನ ಗುಂಜಿ ಮತ್ತು ಜಾಂಬೋಟಿ ಹೋಬಳಿ ವ್ಯಾಪ್ತಿಯ 11 ಕ್ಲಸ್ಟರ್ ಗಳ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಲೋಂಡಾ, ಗುಂಜಿ, ಶಿರೋಲಿ, ನೀಲಾವಡೆ, ಮೊಹೀಶೇತ, ನಾಗರಗಾಳಿ, ಹಲಗಾ, ಬಿಜಗರ್ಣಿ, ಜಾಂಬೋಟಿ, ಬೈಲೂರು, ಕಣಕುಂಬಿ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.