30 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ ; ತಪ್ಪಿದ ದೊಡ್ಡ ದುರಂತ
ಬೆಳಗಾವಿ : ಸುಮಾರು ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಖಾಸಗಿ ಶಾಲೆ ಬಸ್ ಪಲ್ಟಿಯಾಗಿದ್ದು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ.
ಜಿಲ್ಲೆಯ ಮೂಡಲಗಿ ತಾಲೂಕಿನ ಪಟ್ಟಗುಂದಿ ಗ್ರಾಮದ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಸಿ ಎನ್. ಮುಗಳಖೋಡ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
1ರಿಂದ 7ನೇ ತರಗತಿಯ ಸುಮಾರು 30 ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಚಾಲಕನ ಅಜಾಗರೂಕತೆ ಕಾರಣ ಎಂದು ಹೇಳಲಾಗುತ್ತಿದ್ದು ಘಟನಾ ಸ್ಥಳಕ್ಕೆ ಬಿಇಓ ಅಜೀತ್ ಮನ್ನಿಕೇರಿ ಭೇಟಿ ನೀಡಿ ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ಪಡೆದುಕೊಂಡರು.


