SDA ನೌಕರ ಆತ್ಮಹತ್ಯೆ ; ತಲೆಮರೆಸಿಕೊಂಡ ಮೂವರು ಆರೋಪಿಗಳು
ಬೆಳಗಾವಿ : ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಹೌದು ತಹಶಿಲ್ದಾರ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ರುದ್ರಣ್ಣ ನೇಣು ಬಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ಕುರಿತು ಬೆಳಗಾವಿ ತಾಲೂಕು ತಹಶಿಲ್ದಾರ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಸಹಾಯಕ ಸೋಮು ಹಾಗೂ ನೌಕರ ಅಶೋಕ ಕಬ್ಬಲಿಗೇರ್ ಪ್ರಕರಣ ದಾಖಲಾಗಿತ್ತು.
ಸಧ್ಯ ಈ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ತಮ್ಮ ಮೋಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಆರೋಪಿತರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದು ಎಸಿಪಿ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.
ವರ್ಗಾವಣೆ ವಿಚಾರವಾಗಿ ರುದ್ರಣ್ಣ ಅವರಿಂದ ಹಣ ಪಡೆದು ನಂತರ ಬೇರೆಡೆಗೆ ವರ್ಗಾವಣೆ ಮಾಡಿದ್ದ ಹಿನ್ನಲೆಯಲ್ಲಿ ನೌಕರ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಮಂಗಳವಾರ ಬೆಳಿಗ್ಗೆ ನಗರದ ತಹಶಿಲ್ದಾರ ಕಚೇರಿಯಲ್ಲೇ ರುದ್ರಣ್ಣ ಯಡವಣ್ಣವರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುಂಚಿತವಾಗಿ ತಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದರು.