Select Page

ಪಾರಿವಾಳ ಬೆಟ್ಟಿಂಗ್ ಗಲಾಟೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಮಗ ಆತ್ಮಹತ್ಯೆಗೆ ಶರಣು

ಪಾರಿವಾಳ ಬೆಟ್ಟಿಂಗ್ ಗಲಾಟೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಮಗ ಆತ್ಮಹತ್ಯೆಗೆ ಶರಣು

ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ (BJP worker Shankutala Nataraj) ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ.

ಮೃತ ಬಾಲಕನನ್ನು ತ್ರಿಶಾಲ್ (13) ಎಂದು ಗುರುತಿಸಲಾಗಿದೆ. ಮೃತ ಬಾಲಕ 7 ನೇ ತರಗತಿಯಲ್ಲಿ ಓದುತ್ತಿದ್ದ.

ತ್ರಿಶಾಲ್‌ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ತ್ರಿಶಾಲ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!