Select Page

ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ನಿಧನ



ಬೆಂಗಳೂರು : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ವಿಧಿವಶರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು ತಿಂಗಳಿಂದ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಹಾದಿಯಾಗಿ ಹಿರಿಯ ನಾಯಕರು ಶಾಮನೂರರ ಆರೋಗ್ಯ ವಿಚಾರಿಸಿದ್ದರು.

ಶಾಮನೂರ್ ಶಿವಶಂಕರಪ್ಪ ಅವರು 1931 ಜೂನ್‌ 16ರಂದು ಶಾಮನೂರು ಕಲ್ಲಪ್ಪ – ಶಾಮನೂರು ಸಾವಿತ್ರಮ್ಮ ದಂಪತಿ ಪುತ್ರನಾಗಿ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು.

ಮೃತರು ಪತ್ನಿ ಪಾರ್ವತಮ್ಮ, ನಾಲ್ವರು ಪುತ್ರಿಯರಾ ಡಾ. ಮಂಜುಳಾ ಶಿವಶಂಕರ್, ಸುಧಾ ಪಾಟೀಲ್, ಡಾ. ಶೈಲಜಾ ಭಟ್ಟಾಚಾರ್ಯ, ಮೀನಾ ಡಾ. ಶರಣ್‌ ಪಾಟೀಲ್ ಹಾಗೂ ಮೂವರು ಗಂಡು ಮಕ್ಕಳಾದ ಎಸ್.ಎಸ್ ಬಕ್ಕೇಶ್, ಎಸ್.ಎಸ್ ಗಣೇಶ್, ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅಪಾರ ಬಂಧು ಬಳಗವನ್ನಗಲಿದ್ದಾರೆ





Advertisement

Leave a reply

Your email address will not be published. Required fields are marked *

error: Content is protected !!