VIDEO – ಶಿವಮೂರ್ತಿ ಮುರುಘಾ ಶರಣರ ಪ್ರತಿಮೆ ಧ್ವಂಸಗೊಳಿಸಿದ ಗ್ರಾಮಸ್ಥರು
ಚಿತ್ರದುರ್ಗ : ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಿದ ಹಿನ್ನಲೆ ಚಿತ್ರದುರ್ಗ ಶಿವಮೂರ್ತಿ ಮುರುಘಾ ಶರಣರ ಮೇಲೆ ಫೋಕ್ಸೊ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ಶ್ರೀಗಳ ವಿರುದ್ಧ ಕೆಲವರು ಆಕ್ರೋಶ ಹೊರಹಾಕಿದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದಲ್ಲಿ ನಿರ್ಮಿಸಲಾಗಿದ್ದ ಶಿವಮೂರ್ತಿ ಮುರುಘಾ ಶರಣರ ಪ್ರತಿಮೆಯನ್ನು ಗ್ರಾಮಸ್ಥರು ಸೋಮವಾರ ಧ್ವಂಸಗೊಳಿಸಿದ್ದಾರೆ.
ಇನ್ನೂ ಘಟನೆ ಬೆಳಕಿಗೆ ಬಂದು ಒಂದು ವಾರ ಕಳೆಯುತ್ತಿದ್ದರು ಪೊಲೀಸರು ಈ ವರೆಗೆ ಶರಣರನ್ನು ವಶಕ್ಕೆ ಪಡೆದು ತನಿಖೆ ನಡೆಸಿಲ್ಲ ಯಾಕೆ ಎಂಬ ಆರೋಪ ಕೇಳಿಬರುತ್ತಿದೆ. ಜೊತೆಗೆ ಹಲವೆಡೆ ಶ್ರೀಗಳ ವಿರುದ್ಧ ಪ್ರತಿಭಟನೆ ಕೂಡಾ ನಡೆಸಲಾಗುತ್ತಿದೆ.