
ಷೇರು ಮಾರುಕಟ್ಟೆಯಲ್ಲಿ ನಷ್ಟ ; ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

ಹೈದರಾಬಾದ್ : ಶೇರು ಮಾರುಕಟ್ಟೆಯಲ್ಲಿ ಹಾಕಿದ್ದ ಕೋಟ್ಯಾಂತರ ರೂ. ನಷ್ಟವಾಗಿದ್ದಕ್ಕೆ ಮನನೊಂದು ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.
ಹೈದರಾಬಾದ್Hydrabad ಅಂಬರಪೇಟ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೆಂಕಟೇಶ ಪೇದೆ ಮೃತ ದುರ್ದೈವಿ. ಷೇರು ಮಾರುಕಟ್ಟೆಯಲ್ಲಿ ಒಂದು ಕೋಟಿ ರು. ನಷ್ಟವಾದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಅಂಬರಪೇಟದ ದುರ್ಗಾ ನಗರದ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಷೇರು ಮಾರುಕಟ್ಟೆ ( Stock market ) ನಂಬಿ ಹಾಕಿದ್ದ ಹಣ ಎಲ್ಲಾ ನಷ್ಟವಾದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ತಿಳಿದುಬಂದಿದೆ.