Select Page

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಸಚಿವೆ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಸಚಿವೆ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಪಟ್ಟಣದಲ್ಲಿ ಮಹಿಳೆಯರಿಗಾಗಿ ಹಳದಿ, ಕುಂಕುಮ ಕಾರ್ಯಕ್ರಮ ಆಯೋಜಿಸಿದ್ದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಬುಧವಾರ ರಾತ್ರಿ ನಿಪ್ಪಾಣಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಮಹಿಳೆಯರಿಗಾಗಿ ಹಳದಿ, ಕುಂಕುಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಚಿತ್ರ ಬಳಕೆ ಮಾಡಲಾಗಿದ್ದು, ಕಾರ್ಯಕ್ರಮ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು.

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!