ಶೆಟ್ಟರ ಅಂಗಡಿಗೆ ನಡ್ಡಾ ಭೇಟಿ ; ಏನುಂಟು…ಏನಿಲ್ಲ ಲೆಕ್ಕಾಚಾರ
ಬೆಳಗಾವಿ : ಬೆಳಗಾವಿಯಲ್ಲಿ ಬಿಜೆಪಿಯ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ಸಂಜೆ ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಸಂಸದೆ ಮಂಗಲಾ ಅಂಗಡಿ ಮನೆಗೆ ದಿಢೀರ್ ಭೇಟಿ ನೀಡಿದ್ದು ನಾನಾ ವಿಶ್ಲೇಷಣೆಗೆ ಕಾರಣವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮಂಗಲಾ ಅಂಗಡಿಗೆ ಟಿಕೆಟ್ ಕೈ ತಪ್ಪುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ಬೆಳಗಾವಿ ಬಿಜೆಪಿಗರಿದ್ದಾರೆ. ಈ ಹಿನ್ನೆಲೆಯಲ್ಲಿ ನಡ್ಡಾ ಭೇಟಿ ನೀಡಿ ಏನಾದರೂ ಸೂಚನೆ ನೀಡಿದರಾ ಎನ್ನುವ ಚರ್ಚೆ ನಡೆದಿವೆ.
ಈ ಸಂದರ್ಭದಲ್ಲಿ ಸಂಕಲ್ಪ ಶೆಟ್ಟರ್, ಶೃದ್ಧಾ ಶಟ್ಟರ್, ಸೃರ್ತಿ ಪಾಟೀಲ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಚಿಕ್ಕೋಡಿಯಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಇವರು. ಕರ್ನಾಟಕ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪಾಕ್ ಪರ ಮಾತನಾಡಲು ಪಕ್ಷ ನಡೆಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಫೆಬ್ರುವರಿ 27ರಂದು ನಡೆದ ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ಕಾಂಗ್ರೆಸ್ ನಾಯಕ ಸೈಯದ್ ನಾಸೀರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಈ ಸಂಬಂಧ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ವಿಧಾನಸಭೆ ಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿರಲಿಲ್ಲ. ಆದರೆ ಜನರು ಆಯ್ಕೆ ಮಾಡಿರುವ ಸರ್ಕಾರವು ಜನರಿಗೆ ಮೋಸ ಮಾಡುತ್ತಿದ್ದು, ಹಾದಿ ತಪ್ಪಿಸುತ್ತಿದೆ ಎಂಬುದನ್ನು ನೀವೀಗ ಮನಗಂಡಿರಬಹುದು ಎಂದು ನಡ್ಡಾ ಹೇಳಿದರು.