ಛತ್ರಪತಿ ಶಿವಾಜಿ ಮಹಾರಾಜರ ಚಿತ್ರಕ್ಕೆ ಅಪಮಾನ – ಕ್ರಮಕ್ಕೆ ಶಾಸಕ ಅಭಯ್ ಪಾಟೀಲ್ ಆಗ್ರಹ
ಬೆಳಗಾವಿ : ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಹೆಸರಿನ ಅಕೌಂಟ್ ನಿಂದ ಹರಿಬಿಡಲಾಗಿದ್ದು, ಈ ಕುರಿತು ಆರೋಪಿಯನ್ನು ಬಂಧಿಸುವಂತೆ ಶಾಸಕ ಅಭಯ್ ಪಾಟೀಲ್ ತಡರಾತ್ರಿ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಭೇಟಿಮಾಡಿ ಮನವಿ ಮಾಡಿದ್ದಾರೆ.
ಶಿವಾಜಿ ಮಹಾರಾಜರ ಪೋಟೋ ವನ್ನು ಅಶ್ಲೀಲವಾಗಿ ತಿರುಚಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ಕುರಿತು ಮಾತನಾಡಿದ ಶಾಸಕ ಅಭಯ್ ಪಾಟೀಲ್. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಹಿಂದೂ ಧರ್ಮ ಅವಹೇಳನ ಮಾಡುವವರನ್ನು ಪೊಲೀಸರು ಬಂಧಿಸಬೇಕೆಂದು ಆಗ್ರಹಿಸುವುದಾಗಿ ಹೇಳಿದರು.