
ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು

ಶಿವಮೊಗ್ಗ : ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮಾಳೂರು ಗ್ರಾಮದ ಮಂಜುಳಾ ( 25 ) ಮೃತ ದುರ್ದೈವಿ. ಫೆ. 10 ರಂದು ತಿರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಂತರ ಇವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.
ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಕೊನೆಗೂ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ.
ಕಳೆದ ವರ್ಷ ಮದುವೆಯಾಗಿದ್ದ ಮಂಜುಳಾ ಮುದ್ದಾದ ಮಗುವಿಗೆ ಜನ್ಮ ನೀಡಿದ್ದಾಳೆ. ಆಸ್ಪತ್ರೆ ಆವರಣದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.